ಕಡಬ: ತುಂಬು ಗರ್ಭಿಣಿಯೊಬ್ಬರು 108 ಆ್ಯಂಬುಲೆನ್ಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಶುಕ್ರವಾರ ಕಡಬದಲ್ಲಿ ನಡೆದಿದೆ.
ಕಡಬದ ಕುಟ್ರುಪ್ಪಾಡಿ ಗ್ರಾಮದ ಅಲಾರ್ಮೆ ನಿವಾಸಿ ಲಲಿತಾ ಎಂವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಅವರನ್ನು 108 ಆ್ಯಂಬುಲೆನ್ಸ್ ಮೂಲಕ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು.
ಈ ವೇಳೆ ಆ್ಯಂಬುಲೆನ್ಸ್ ಆಲಂಕಾರು ಸಮೀಪದ ಶಾಂತಿಮೊಗರು ಎಂಬಲ್ಲಿ ತಲುಪುತ್ತಿದೆಂ್ತಯೇ ಅವರಿಗೆ ಹೆರಿಗೆ ನೋವು ಹೆಚ್ಚಾಗಿದೆ. ಈ ವೇಳೆ ಆ್ಯಂಬುಲೆನ್ಸ್ ನ ಸಿಬ್ಬಂದಿ ಇಎಂಟಿ ನವ್ಯಾ ಹಾಗೂ ಪೈಲಟ್ ರಾಜೇಶ್ ಅವರ ಸಹಾಯದಿಂದ ಅವರು ಆಂಬುಲೆನ್ಸ್ ನಲ್ಲೇ ಹೆಣ್ಣು ಮಗುವುಗೆ ಜನ್ಮ ನೀಡಿದರು.
ಸದ್ಯ ತಾಯಿ ಮತ್ತು ಮಗು ಆರೋಗ್ಯವಂತರಾಗಿದ್ದಾರೆ. ಹೆರಿಗೆಯ ಬಳಿಕ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
Kshetra Samachara
13/02/2021 09:33 am