ಮಂಗಳೂರು: ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘಿಸುವವರು ಇನ್ನು ಮುಂದೆ ಬಹಳ ಎಚ್ಚರವಾಗಿರಬೇಕಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದೆ ತೀರುಗಾಡಿದ್ರೆ ಅಕ್ಟೋಬರ್ 5 ರಿಂದ ಬಾರಿ ಮೊತ್ತದ ದಂಡ ಪಾವತಿಸಬೇಕಾಗುತ್ತದೆ.
ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಕೊರೊನಾ ನಿಯಂತ್ರಣದ ಹಿನ್ನೆಲೆ ಜಿಲ್ಲಾಡಳಿತ ಈಗಾಗಲೇ ಅಧಿಕಾರಿಗಳಿಗೆ ಅಧಿಕೃತ ಸೂಚನೆಗಳನ್ನು ನೀಡಿದೆ.
ರಾಜ್ಯ ಸರ್ಕಾರದ ಸೂಚನೆಯಂತೆ, ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದ ಜನರಿಗೆ 1,000 ರೂ.ಗಳ ದಂಡ ಮತ್ತು ಇತರ ಸ್ಥಳಗಳಲ್ಲಿ ಮಾಸ್ಕ್ ಹಾಕದವರಿಗೆ 500 ರೂ. ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಹೇಳಿದರು.'
ಈವರೆಗೆ ಮಾಸ್ಕ್ ಧರಿಸದವರಿಗೆ 200 ರೂ. ದಂಡ ವಿಧಿಸಲಾಗುತ್ತಿತ್ತು.
ಇನ್ನು ನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೋಮವಾರದಿಂದ ನಗರ ಪಾಲಿಕೆ ಮಿತಿಯೊಳಗೆ ಮಾಸ್ಕ್ ಧರಿಸದವರಿಗೆ ಅಧಿಕ ದಂಡವನ್ನು ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಪರಿಷ್ಕೃತ ದಂಡ ಜಾರಿಗೆ ಬಂದಿದ್ದು, ಭಾನುವಾರದಿಂದಲೇ ಮಾಸ್ಕ್ ಧರಿಸದವರಿಗೆ 500 ರೂ.ಗಳ ದಂಡ ವಿಧಿಸಲಾಗಿದೆ ಎಂದು ಉಡುಪಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.
Kshetra Samachara
05/10/2020 04:18 pm