ಮಂಗಳೂರು: ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾನೂನು ಬಾಹಿರ ಹಾಗೂ ಶಿಕ್ಷಾರ್ಹ ಅಪರಾಧ ಎಂದು ಜಿಲ್ಲಾ ಆರೋಗ್ಯ ಮತ್ತ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದ್ದಾರೆ.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಕಚೇರಿ ಸಭಾಂಗಣದಲ್ಲಿ ನಡೆದ ಪಿ.ಸಿ-ಪಿ.ಎನ್.ಡಿ.ಟಿ. ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸವಪೂರ್ವ ಭ್ರೂಣಲಿಂಗ ಪತ್ತೆಯ ಮೊದಲಿನ ಅಪರಾಧಕ್ಕೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಲಾಗುವುದು. 2ನೇ ಅಪರಾಧಕ್ಕೆ 5 ವರ್ಷ ಜೈಲು ಶಿಕ್ಷೆ ಹಾಗೂ 50,000 ರೂ. ವಿಧಿಸಲಾಗುವುದು ಎಂದರು.
ಸ್ಕ್ಕಾನಿಂಗ್ ಸೆಂಟರ್‌ಗಳು ಪ್ರತಿವರ್ಷ ನಿಗದಿತ ದಿನಾಂಕದೊಳಗೆ ತಮ್ಮ ಪರವಾನಿಗೆ ನವೀಕರಣಗೊಳಿಸದಿದ್ದಲ್ಲಿ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ (ಪ್ರಭಾರ) ಡಾ.ದೀಪಾ, ಅನಿತ್ ರಾಜ್ ಭಟ್, ಡಾ. ಚಿದಾನಂದ ಮೂರ್ತಿ, ಡಾ.ಅಮೃತ ಭಂಡಾರಿ, ಡಾ.ರೀಟಾ ನೊರೊನ್ಹ, ಡಾ.ವತ್ಸಲಾ ಕಾಮತ್, ಮಂಜುನಾಥ್ ಬಿ. ಉಪಸ್ಥಿತರಿದ್ದರು.
Kshetra Samachara
13/11/2020 10:31 am