ಮಂಗಳೂರು: ಗುತ್ತಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಇಂದಿನಿಂದ ಕೊರೊನಾ ಸಂಬಂಧಿತ ಮಾಹಿತಿ ಸರಕಾರಕ್ಕೆ ಸಲ್ಲಿಕೆಯಾಗುತ್ತಿಲ್ಲ, ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರು, ಹೊರ ಗುತ್ತಿಗೆ ನೌಕರರು, ವೈದ್ಯಕೀಯ, ಅರೆವೈದ್ಯಕೀಯ, ಕಚೇರಿ ಸಿಬ್ಬಂದಿ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ಕೈಗೊಂಡಿದ್ದಾರೆ.
ಮುಷ್ಕರ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಿಗೆ ನೌಕರರ ಸಂಘ ಬುಧವಾರವೇ ಪತ್ರ ಬರೆದಿದ್ದು, ಸೆ.24ರಿಂದ ಬೇಡಿಕೆ ಈಡೇರುವ ತನಕ ಮುಷ್ಕರ ನಡೆಸಲು ನಿರ್ಧಾರ ಕೈಗೊಳ್ಳಲಾಗಿದ್ದು, ನಮ್ಮ ನ್ಯಾಯಯುತ ಬೇಡಿಕೆಗಳು ಈಡೇರುವ ವರೆಗೆ ಸರಕಾರಕ್ಕೆ ಕೋವಿಡ್ ಸೇರಿದಂತೆ ಇತರ ಯಾವುದೇ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸುವುದಿಲ್ಲ ಮತ್ತು ಯಾವುದೇ ಸಿಬ್ಬಂದಿ ಕರ್ತವ್ಯಕ್ಕೂ ಹಾಜರಾಗುವುದಿಲ್ಲ ಎಂದು ಎಚ್ಚರಿಕೆಯನ್ನೂ ನೀಡಿತ್ತು. ಆದರೆ, ಸರಕಾರ ಆರೋಗ್ಯ ಇಲಾಖೆಯ ನೌಕರರ ಯಾವುದೇ ಬೇಡಿಕೆ ಆಲಿಸುವ ಗೋಜಿಗೆ ಮುಂದಾಗದ ಹಿನ್ನೆಲೆಯಲ್ಲಿ ನೌಕರರು ಮುಷ್ಕರ ಆರಂಭಿಸಿದ್ದಾರೆ.
Kshetra Samachara
24/09/2020 10:07 pm