ಬಂಟ್ವಾಳ: ಶಾಸಕ ಯು.ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಬಿಜೆಪಿ ಕ್ಷೇತ್ರ ಸಮಿತಿ ಮೂಲಕ ಸುಮಾರು 18 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಆಯುಷ್ಮಾನ್ ಕಾರ್ಡ್ ಉಚಿತವಾಗಿ ವಿತರಿಸಲಾಗಿದೆ ಎಂದು ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ ಹೇಳಿದ್ದಾರೆ.
ಕರ್ಪೆ ಸಮಾಜಮಂದಿರದಲ್ಲಿ ಬಿಜೆಪಿಯ ಕ್ಷೇತ್ರ ಸಮಿತಿ, ಮಹಿಳಾ ಮೋರ್ಚಾ, ಯುವ ಮೋರ್ಚಾ ಮತ್ತು ಬೂತ್ ಸಮಿತಿ ವತಿಯಿಂದ ನಡೆದ ಆಯುಷ್ಮಾನ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಧ್ಯಕ್ಷ ದೇವಪ್ಪ ಪೂಜಾರಿ ಮಾರ್ಗದರ್ಶನದಲ್ಲಿ ಪ್ರಧಾನಿ ಮೋದಿ ಅವರ ಜನ್ಮದಿನಾಚರಣೆಯ ಸೇವಾ ಸಪ್ತಾಹದ ಅಂಗವಾಗಿ ಕಾರ್ಯಕ್ರಮ ನಡೆಯುತ್ತಿದೆ ಎಂದವರು ಹೇಳಿದರು.
ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಚೌಟ ಉದ್ಘಾಟಿಸಿ, ಶುಭ ಹಾರೈಸಿದರು. ಯುವ ಮೋರ್ಚಾ ಕ್ಷೇತ್ರಾಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು, ಮಹಿಳಾ ಮೋರ್ಚಾ ಪ್ರದಾನ ಕಾರ್ಯದರ್ಶಿ ಸೀಮಾ ಮಾಧವ, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಮಂದಾರತಿ ಎಸ್.ಶೆಟ್ಟಿ, ಎ.ಪಿ.ಎಮ್.ಸಿ. ಮಾಜಿ ಸದಸ್ಯ ರತ್ನಕುಮಾರ್ ಚೌಟ, ಸಂಗಬೆಟ್ಟು ಗ್ರಾಪಂ ನಿಕಟಪೂರ್ವ ಉಪಾಧ್ಯಕ್ಷ ಸತೀಶ್ ಪೂಜಾರಿ, ಸಿದ್ದಕಟ್ಟೆ ಸಿ.ಎ.ಬ್ಯಾಂಕ್ ನಿರ್ದೇಶಕ ಉಮೇಶ್ ಗೌಡ ಮಂಚಕಲ್ಲು, ಕರ್ಪೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ನವೀನ ಪೂಜಾರಿ, ತೇಜಸ್ ಮರ್ದೊಟ್ಟು, ಗಣ್ಯರಾದ ಸುಬ್ರಹ್ಮಣ್ಯ ಭಟ್ ದೋಟ, ಹರೀಶ್ ಪೂಜಾರಿ ಶೆಟ್ಟಿಬೆಟ್ಟು,ರಂಜಿತ್ ಪೂವಳ ಕರ್ಪೆ, ಗಂಗಾಧರ ಪೂಜಾರಿ, ಹರೀಶ್ ಪೂಜಾರಿ ಪಾದೆ, ದಾಮೋದರ ಪೂಜಾರಿ ಸಮಾಜಮಂದಿರ, ಮತ್ತಿತರರು ಉಪಸ್ಥಿತರಿದ್ದರು.
ಜಿಪಂ ಸದಸ್ಯ ತುಂಗಪ್ಪ ಬಂಗೇರ ಭೇಟಿ ನೀಡಿ ಶುಭ ಹಾರೈಸಿ ಕಾರ್ಯಕ್ರಮದ ಬಗ್ಗೆ ಶ್ಲಾಘಿಸಿದರು. ಸ್ಥಳೀಯ ತಾಪಂ ಸದಸ್ಯ ಪ್ರಭಾಕರ ಪ್ರಭು ಸ್ವಾಗತಿಸಿ, ನಿರೂಪಿಸಿದರು.
Kshetra Samachara
19/09/2020 06:12 pm