ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಹೊಸ ಮಂಗಳೂರು ಬಂದರಿನಿಂದ ನಗರಕ್ಕೆ ಬರುವ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್-19 ಪರೀಕ್ಷೆ ಕಡ್ಡಾಯವಾಗಿದೆ.
ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆ ಹೊರಡಿಸಿದ್ದು, ''ಅಂತಾರಾಷ್ಟ್ರೀಯ ಪ್ರಯಾಣಿಕರು 72 ಗಂಟೆಯ ಒಳಗೆ ಕೊರೊನಾ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಂಡು ನೆಗೆಟಿವ್ ವರದಿ ಹೊಂದಿರಬೇಕು. ರೂಪಾಂತರ ಕೊರೊನಾ ವೈರಸ್‌ನ ಎರಡನೇ ಅಲೆ ಹರಡುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆಗಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ'' ಎಂದು ತಿಳಿಸಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಡಿಸೆಂಬರ್ 26ರಿಂದ ಪರೀಕ್ಷೆಗೆ ಒಳಗಾಗುತ್ತಿದ್ದಾರೆ. ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ತಪ್ಪದೆ ಕೋವಿಡ್-19 ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಅಷ್ಟೇ ಅಲ್ಲದೆ ರಿಪೋರ್ಟ್ ಬರುವವರೆಗೂ ಹೋಂ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Kshetra Samachara
28/12/2020 10:56 pm