ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೋನಾ ಬಗ್ಗೆ ಎಚ್ಚರಿಕೆವಹಿಸಿ ಜನರಲ್ಲಿ ಜಾಗೃತಿ ಮೂಡಿಸಿ: ಡಾ. ರಾಮಚಂದ್ರ ಬಾಯಿರಿ

ಮಂಗಳೂರು:ಕರ್ನಾಟಕ ರಾಜ್ಯ ಆರೋಗ್ಯ ಸಹಾಯಕರು ಮತ್ತು ಮೇಲ್ವಿಚಾರಕರು ಕೇಂದ್ರ ಸಂಘ ಬೆಂಗಳೂರು ಜಿಲ್ಲಾ ಶಾಖೆ ದಕ್ಷಿಣ ಕನ್ನಡ ಜಿಲ್ಲೆ ವಾರ್ಷಿಕ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆ ಕಾರ್ಯಕ್ರಮ ಹಾಗೂ ನವೀಕೃತ ಸಂಘದ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಟ್ಟಡದಲ್ಲಿರುವ ನಂದಿನಿ ಸಭಾಭವನದಲ್ಲಿ ನಡೆಯಿತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ರಾಮಚಂದ್ರ ಬಾಯರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ।। ಸುಜಯ್ ಭಂಡಾರಿ ಜಿಲ್ಲಾ ಸಂಘದ ಅಧ್ಯಕ್ಷರಾದ ಸಿ ಆರ್ ಪ್ರದೀಪ್ ಕುಮಾರ್ ನೇತೃತ್ವದಲ್ಲಿ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆಗೊಳಿಸಲಾಯಿತು ಹಾಗೂ ನವೀಕೃತ ಕಟ್ಟಡವನ್ನು ಉದ್ಘಾಟಿಸಲಾಯಿತು.

ಈ ಸಂದರ್ಭ ಡಾ. ರಾಮಚಂದ್ರ ಬಾಯರಿ ಮಾತನಾಡಿ ಕೊರೋನಾ ದಿನಗಳಲ್ಲಿಯೂ ಕರ್ತವ್ಯ ನಿರ್ವಹಿಸಿದ ಸಂಘದ ಆರೋಗ್ಯ ಸಹಾಯಕರು ಹಾಗೂ ಮೇಲ್ವಿಚಾರಕರ ಕರ್ತವ್ಯವನ್ನು ಶ್ಲಾಘಿಸಿ ಮುಂದಿನ ದಿನಗಳಲ್ಲಿ ಕೊರೋನಾ ಬಗ್ಗೆ ಎಚ್ಚರಿಕೆವಹಿಸಿ ಜನರಲ್ಲಿ ಜಾಗೃತಿ ಮೂಡಿಸುವ ಯತ್ನ ಮಾಡಬೇಕೆಂದು ಕರೆ ನೀಡಿದರು. ಪ್ರದೀಪ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Edited By : Nirmala Aralikatti
Kshetra Samachara

Kshetra Samachara

22/01/2021 07:29 am

Cinque Terre

5.93 K

Cinque Terre

0

ಸಂಬಂಧಿತ ಸುದ್ದಿ