ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ದ.ಕ.ಜಿಲ್ಲೆಯಲ್ಲಿ 200 ಕ್ಕೂ ಹೆಚ್ಚು ಕೇರಳದ ವಿದ್ಯಾರ್ಥಿಗಳ ಗಂಟಲು ದ್ರವ ಮಾದರಿ ನಿಮಾನ್ಸ್ ಗೆ ರವಾನೆ

ಮಂಗಳೂರು: ಮಂಗಳೂರು ಸೇರಿದಂತೆ ದ.ಕ.ಜಿಲ್ಲೆಗೆ ಕೇರಳದಿಂದ ವ್ಯಾಸಂಗಕ್ಕೆಂದು ಬಂದಿರುವ 200ಕ್ಕೂ ಮಿಕ್ಕಿ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಫಟ್ಟಿದ್ದು, ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಅವರ ಗಂಟಲ ದ್ರವ ಮಾದರಿಯನ್ನು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಕಳುಹಿಸಲು ನಿರ್ಧರಿಸಲಾಗಿದೆ.

ಇತ್ತೀಚೆಗೆ ಇಂಗ್ಲೆಂಡ್ ನಿಂದ ಭಾರತಕ್ಕೆ ಆಗಮಿಸಿರುವ ಕೆಲವರಲ್ಲಿ ರೂಪಾಂತರಿ ಕೊರೊನಾ ಸೋಂಕು ಕಂಡು ಬಂದಿತ್ತು. ಇದಾದ ಬಳಿಕ ಇಂಗ್ಲೆಂಡ್ನಿಂದ ಆಗಮಿಸಿದ ಎಲ್ಲರ ಗಂಟಲು ದ್ರವ ಮಾದರಿಯನ್ನು ತಪಾಸಣೆ ನಡೆಸಲಾಗುತ್ತಿದೆ. ಬ್ರಿಟನ್ನಿಂದ ಕೇರಳಕ್ಕೆ ಆಗಮಿಸಿದ್ದವರಿಗೂ ರೂಪಾಂತರ ವೈರಸ್ ಲಕ್ಷಣಗಳು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೇರಳದಿಂದ ದ.ಕ.ಜಿಲ್ಲೆಗೆ ಬಂದ ಕೊರೊನಾ ಸೋಂಕಿಗೆ ತುತ್ತಾದ ವಿದ್ಯಾರ್ಥಿಗಳ ಗಂಟಲ ದ್ರವ ಮಾದರಿ ಬೆಂಗಳೂರಿನ ನಿಮಾನ್ಸ್ ಗೆ ಕಳುಹಿಸಲಾಗುತ್ತಿದೆ.

Edited By : Nirmala Aralikatti
Kshetra Samachara

Kshetra Samachara

10/02/2021 10:36 am

Cinque Terre

8.22 K

Cinque Terre

0

ಸಂಬಂಧಿತ ಸುದ್ದಿ