ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಕಾರಿಬೆಟ್ಟು:ಬಯಲು ಬಹಿರ್ದೆಸೆ ಮುಕ್ತ ತರಬೇತಿ ಕಾರ್ಯಾಗಾರ

ಮುಲ್ಕಿ: ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಬಯಲು ಬಹಿರ್ದೆಸೆ ಮುಕ್ತ ತರಬೇತಿ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅತಿಕಾರಿಬೆಟ್ಟು ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್ ಮಾತನಾಡಿ ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಗ್ರಾಮಸ್ಥರು ಸಹಕರಿಸಬೇಕು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ಶಿಕ್ಷಣ ಸಂವಹನ ಸಂಯೋಜಕಿ ಶ್ವೇತಾ ತರಬೇತಿಯನ್ನು ನಡೆಸಿಕೊಟ್ಟರು.

ಅತಿಕಾರಿಬೆಟ್ಟು ಪಂಚಾಯತ್ ಸದಸ್ಯರಾದ ಜಯ ಕುಮಾರ್, ಪದ್ಮಿನಿ ವಿ ಶೆಟ್ಟಿ, ಕಾರ್ಯದರ್ಶಿ ಯೋಗೀಶ್, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

05/01/2022 05:20 pm

Cinque Terre

1.83 K

Cinque Terre

0

ಸಂಬಂಧಿತ ಸುದ್ದಿ