ಮೂಡಬಿದ್ರೆ: ಇಲ್ಲಿಗೆ ಸಮೀಪದ ಕಲ್ಲಮುಂಡ್ಕೂರು ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ 20 ಲಕ್ಷ ರೂಪಾಯಿ ಅನುದಾನದಲ್ಲಿ ದುರಸ್ಥಿ ಮತ್ತು ನವೀಕರಣ ಕಾಮಗಾರಿಯ ಶಿಲಾನ್ಯಾಸವನ್ನು ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ನೆರವೇರಿಸಿದರು.
ಈ ಸಂದರ್ಭ ಅವರು ಮಾತನಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಡವರ್ಗದವರಿಗೆ ಉತ್ತಮ ಚಿಕಿತ್ಸೆಗಳು ಲಭಿಸುತ್ತಿದ್ದು , ಆರೋಗ್ಯ ಕೇಂದ್ರಗಳನ್ನು ನವೀಕರಣದ ಮೂಲಕ ಮತ್ತಷ್ಟು ಅಭಿವೃದ್ಧಿಗೆ ಚಾಲನೆ ನೀಡಲಾಗುವುದು ಎಂದರು.
ಈ ಸಂದರ್ಭ ಸ್ಥಳೀಯ ಪಂಚಾಯತ್ ಸದಸ್ಯರು, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು
Kshetra Samachara
05/02/2022 04:45 pm