ಕೂಳೂರು: ನಗರದ ಹೊರವಲಯದ ಕೂಳೂರಿನಲ್ಲಿ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಸುಮಾರು 45 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿಯವರು ಸೋಮವಾರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಲಾ, ಜಿಲ್ಲಾ ಆರೋಗ್ಯಾಧಿಕಾರಿ ಕಿಶೋರ್, ತಾಲೂಕು ಆರೋಗ್ಯಾಧಿಕಾರಿ ಸುಜಯ್, ಮನಪಾ ಸದಸ್ಯರು, ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
07/02/2022 03:46 pm