ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಕ್ರೀಡೆಗೆ ಪ್ರೋತ್ಸಾಹ; ಐಕಳ ಹರೀಶ್ ಶೆಟ್ಟಿ

ಸುರತ್ಕಲ್: ಸುರತ್ಕಲ್ ಬಂಟರ ಸಂಘ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಸುರತ್ಕಲ್ ಗೋವಿಂದ ದಾಸ ಕಾಲೇಜು ಮೈದಾನದಲ್ಲಿ ಬಂಟರ ಕ್ರೀಡೋತ್ಸವ ನಡೆಯಿತು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಪಥಸಂಚಲನದಲ್ಲಿ ಭಾಗವಹಿಸಿ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಸಮಾಜ ಸೇವೆಯ ಜೊತೆಗೆ ಕ್ರೀಡೆಗೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಕ್ರೀಡಾಳುಗಳಿಗೆ ಒಕ್ಕೂಟ ನಿರಂತರ ಸಹಾಯ ಮಾಡುತ್ತಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ ವಹಿಸಿದ್ದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮೇಯರ್ ಪ್ರೇಮಾನಂದ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಬಂಟರ ಮಾತೃ ಸಂಘದ ಕೋಶಾಧಿಕಾರಿ ಕೃಷ್ಣಪ್ರಸಾದ್ ರೈ, ಒಕ್ಕೂಟದ ಜೊತೆ ಕಾರ್ಯದರ್ಶಿ ಸತೀಶ ಅಡಪ ಸಂಕಬೈಲ್, ಕ್ರೀಡಾಪಟು ರೋಹಿತ್ ಕುಮಾರ್ ಕಟೀಲು ,ಸಾಂಸ್ಕೃತಿಕ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಬಾಳ, ಸಮಾರಂಭದಲ್ಲಿ ಐಕಳ ಹರೀಶ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ರೋಹಿತ್ ಕುಮಾರ್ ಕಟೀಲು ರವರನ್ನು ಗೌರವಿಸಲಾಯಿತು.

ಸಂಘದ ವ್ಯಾಪ್ತಿಯ ಹತ್ತು ಮಂದಿ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಯಿತು.

Edited By : PublicNext Desk
Kshetra Samachara

Kshetra Samachara

14/02/2022 10:15 pm

Cinque Terre

1.92 K

Cinque Terre

0

ಸಂಬಂಧಿತ ಸುದ್ದಿ