ಮುಲ್ಕಿ: ಕೆಮ್ರಾಲ್ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಮ್ರಾಲ್ ಗ್ರಾಮ ಪಂಚಾಯತಿ ಅಧ್ಯಕ್ಷೆ ಲೀಲಾ ವಹಿಸಿದ್ದರು. ಪ್ರಜ್ಞಾ ಸಲಹಾ ಕೇಂದ್ರದ ಯೋಜನಾ ಸಂಯೋಜಕ ವಿಲಿಯಂ ಸ್ಯಾಮುವೆಲ್, ಶಿಶು ಅಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ನಾಗರತ್ನ ಆಲ್ ಕಾರ್ಗೋ ಲಾಜಿಸ್ಟಿಕ್ ಲಿ.ನ ಸವಿಸ್ತಾರ್ ಆಳ್ವ, ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ಅರುಣ್ ಪ್ರದೀಪ್ ಡಿ ಸೋಜ, ಕಾರ್ಯದರ್ಶಿ ಹರಿಶ್ಚಂದ್ರ, ಲೆಕ್ಕ ಸಹಾಯಕ ಕೇಶವ ದೇವಾಡಿಗ, ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯಾಧಿಕಾರಿ ಗಣೇಶ್, ಪ್ರಜ್ಞಾ ಸಲಹಾ ಕೇಂದ್ರದ ವಲಯ ಸಂಯೋಜಕ ಪ್ರದೀಪ್ ಕಾಮತ್, ರೇಶ್ಮ ಜೋಗಿ, ಜೋಯ್ಲಿನ್ ಉಪಸ್ಥಿತರಿದ್ದರು. ಇದೇ ವೇಳೆ ಶಿಬಿರಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಕನ್ನಡಕಗಳನ್ನು ವಿತರಿಸಲಾಯಿತು.
Kshetra Samachara
18/02/2022 04:47 pm