ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: "ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯಕ್ಕೆ ಮಹತ್ವ ನೀಡುವ ಕಾರ್ಯಕ್ರಮಗಳು ಶ್ಲಾಘನೀಯ"

ಮುಲ್ಕಿ: ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತ ಜೆಸಿಐ ಮುಲ್ಕಿ ಶಾಂಭವಿ, ಕಾರ್ನಾಡ್ ಶ್ರೀರಾಮ ಸೇವಾ ಮಂಡಳಿ,

ವೀರಕೇಸರಿ ತರುಣ ವೃಂದ ಕೆಎಸ್ ರಾವ್ ನಗರ ಜಂಟಿ ಆಶ್ರಯದಲ್ಲಿ ಮುಕ್ಕ ಶ್ರೀನಿವಾಸ ಆಸ್ಪತ್ರೆ ಸಹಯೋಗದೊಂದಿಗೆ ಮುಲ್ಕಿ ಲಿಂಗಪ್ಪಯ್ಯಕಾಡು ಭಾಗ್ಯವಂತಿ ದೇವಸ್ಥಾನದಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ, ದಂತ ಚಿಕಿತ್ಸಾ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಜೆಸಿ ವಲಯ ಉಪಾಧ್ಯಕ್ಷ ದಿನೇಶ್ ಕೆ ಶೆಟ್ಟಿ ಮಾತನಾಡಿ ವಿಶ್ವ ಆರೋಗ್ಯ ದಿನಾಚರಣೆ ದಿನದಂದು ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯಕ್ಕೆ ಮಹತ್ವ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಸಂಘಟನೆಗಳ ಕಾರ್ಯ ಶ್ಲಾಘನೀಯ ಎಂದರು.

ಮುಖ್ಯ ಅತಿಥಿಗಳಾಗಿ ಕಾರ್ನಾಡ್ ಶ್ರೀ ರಾಮ ಸೇವಾ ಮಂಡಳಿ ಅಧ್ಯಕ್ಷ ಭಾಸ್ಕರ್ ಶೆಟ್ಟಿಗಾರ್ ಮತ್ತು ಕೆಎಸ್ ರಾವ್ ನಗರ ವೀರಕೇಸರಿ ತರುಣ ವೃಂದ ಅಧ್ಯಕ್ಷರಾದ ಪ್ರಶಾಂತ್ ಕೆ ಹಾಗೂ ಮುಕ್ಕ ಶ್ರೀನಿವಾಸ್ ಆಸ್ಪತ್ರೆ ವೈದ್ಯರಾದ ಡಾ. ವಿದ್ಯಾ ಉಪಸ್ಥಿತರಿದ್ದರು

ಜೆಸಿಐ ಮುಲ್ಕಿ ಅಧ್ಯಕ್ಷ ಕಲ್ಲಪ್ಪ ತಡವಲಗ ಸ್ವಾಗತಿಸಿದರು ಕಾರ್ಯದರ್ಶಿ ವಿಶ್ವನಾಥ ಶೆಣೈ ಧನ್ಯವಾದ ಅರ್ಪಿಸಿದರು.ಬಳಿಕ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

Edited By : PublicNext Desk
Kshetra Samachara

Kshetra Samachara

08/04/2022 12:06 pm

Cinque Terre

1.38 K

Cinque Terre

0

ಸಂಬಂಧಿತ ಸುದ್ದಿ