ಮುಲ್ಕಿ: ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.
ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷ ಮನೋಹರ್ ಕೋಟ್ಯಾನ್ ಮಾತನಾಡಿ ಗ್ರಾಮದಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜಿಸುವ ಮೂಲಕ ಆರೋಗ್ಯ ಸುಧಾರಣೆಗೆ ಒತ್ತು ನೀಡುವುದರ ಜೊತೆಗೆ ಗ್ರಾಮದ ಅಭಿವೃದ್ಧಿಗೆ ಪ್ರಾಧಾನ್ಯತೆ ನೀಡಲಾಗುವುದು ಎಂದರು.
ಪಂಚಾಯತ್ ಉಪಾಧ್ಯಕ್ಷೆ ಶಶಿಕಲಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಬಿ, ಕಾರ್ಯದರ್ಶಿ ಯೋಗೀಶ್ ನಾನಿಲ್, ವೈಧ್ಯಾಧಿಕಾರಿ ಡಾ. ಫರಾಹಾನ್ ಎಂ ಬಿ ಬಿ ಎಸ್ ಹಾಗೂ ತಂಡದವರು ಉಪಸ್ಥಿತರಿದ್ದರು. ಗ್ರಾಮಸ್ಥರು ಹಾಗೂ ಎಲ್ಲಾ ಕಟ್ಟಡ ಕಾರ್ಮಿಕರು ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.
Kshetra Samachara
05/05/2022 01:06 pm