ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಯವರ ಕಛೇರಿ, ಮುಲ್ಕಿ ನಗರ ಪಂಚಾಯತ್ ಯವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ದಾದಿಯರ ದಿನವನ್ನು ಕಾರ್ನಾಡು ಲಿಂಗಪ್ಪಯ್ಯ ಕಾಡು ಸಮುದಾಯ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮುಲ್ಕಿ ನಪಂ ಅಧ್ಯಕ್ಷ ಸುಭಾಷ್ ಶೆಟ್ಟಿ ಮಾತನಾಡಿ ಕೊರೋನಾ ದಿನಗಳಲ್ಲಿ ಆರೋಗ್ಯ ಸುಧಾರಣೆಗೆ ದಾದಿಯರ ಸೇವೆ ಸ್ಮರಿಸಿಕೊಂಡರು.
ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ ಭಂಡಾರಿ, ಮುಲ್ಕಿ ನಪಂ ಸದಸ್ಯ ಮಂಜುನಾಥ ಕಂಬಾರ, ಮುಖ್ಯಾಧಿಕಾರಿ ಚಂದ್ರಪೂಜಾರಿ, ಕೆಮ್ರಾಲ್ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಿತ್ರ, ಮುಲ್ಕಿ ಸೈಂಟ್ ಆನ್ಸ್ ಸಂಸ್ಥೆಗಳ ಉಪನ್ಯಾಸಕಿ ಆಗ್ನೆಸ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಲಿಯಮ್ಮ, ತಾಲೂಕ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರದೀಪ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ ಮುಲ್ಕಿ ಪರಿಸರದ ಶುಶ್ರೂಶಕರನ್ನು ಗೌರವಿಸಲಾಯಿತು.
Kshetra Samachara
13/05/2022 12:21 pm