ಮುಲ್ಕಿ:ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೈಲೊಟ್ಟು ಅಂಗನವಾಡಿ ಕೇಂದ್ರದಲ್ಲಿ ಡೆಂಘಿ,ಮಲೇರಿಯಾ ಜಾಗೃತಿ ಮಾಹಿತಿ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್ ಮಾತನಾಡಿ ಗ್ರಾಮದಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ರೋಗ ಮುಕ್ತ ಗ್ರಾಮಕ್ಕೆ ಗ್ರಾಮಸ್ಥರ ಸಹಕಾರ ಅಗತ್ಯ ಎಂದರು.
ಆರೋಗ್ಯ ಸಹಾಯಕಿಯಾದ ನಾಗವೇಣಿಯವರು ಮಲೇರಿಯಾ, ಡೆಂಘಿ ರೋಗಗಳ ಜಾಗೃತಿಯ ಬಗ್ಗೆ ಮಾಹಿತಿಯನ್ನು ನೀಡಿದರು.
ಈ ಸಂದರ್ಭ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಬಿ, ಸಮುದಾಯ ಆರೋಗ್ಯ ಆಧಿಕಾರಿಯಾದ ವಿಲ್ಮಾ, ಶಾಲಾ ಶಿಕ್ಷಕರು,ಆರೋಗ್ಯ ಸಹಾಯಕಿ ನಾಗವೇಣಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆ ಯರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
03/06/2022 03:36 pm