ಬಂಟ್ವಾಳ: ಎರಡು ದಿನಗಳ ಹಿಂದೆ ಕಲ್ಲಡ್ಕ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಹಿಂದು ಸಂಘಟನೆ ಕಾರ್ಯಕರ್ತ ಯತಿರಾಜ್ ಕಲ್ಲಡ್ಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಭೆ ವಿಶ್ವ ಹಿಂದೂ ಪರಿಷತ್-ಬಜರಂಗದಳ ಕಲ್ಲಡ್ಕ ವಲಯ ವತಿಯಿಂದ ಬುಧವಾರ ಸಂಜೆ ಕಲ್ಲಡ್ಕ ಶ್ರೀರಾಮ ಮಂದಿರದ ಮಾಧವ ಸಭಾಂಗಣದಲ್ಲಿ ನಡೆಯಿತು.
ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ, ಮೃದು ಹೃದಯಿಯಾಗಿರುವ ನಿಷ್ಠಾವಂತ ಕಾರ್ಯಕರ್ತನನ್ನು ನಾವು ಕಳೆದುಕೊಂಡಿದ್ದೇವೆ ಎಂದರು.
ಸಂಘಟನೆಗಳ ಪ್ರಮುಖರಾದ ಕ. ಕೃಷ್ಣಪ್ಪ ಮೊದಲಾದವರು ಉಪಸ್ಥಿತರಿದ್ದು, ನುಡಿ ನಮನ ಸಲ್ಲಿಸಿದರು.
Kshetra Samachara
25/11/2020 09:16 pm