ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ನಾಯಕ ಕೆ.ಎಂ.ಶರೀಫ್ ಅಲ್ಪಕಾಲದ ಅನಾರೋಗ್ಯದಿಂದಾಗಿ ಇಂದು ನಿಧನರಾದರು.
ತೀವ್ರ ಅನಾರೋಗ್ಯದ ಕಾರಣದಿಂದ ಅವರನ್ನು ನಗರದ ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧುಮೇಹ ಹಾಗೂ ಇತರ ಸಮಸ್ಯೆಗಳ ಕಾರಣದಿಂದ ಆರೋಗ್ಯ ತೀವ್ರವಾಗಿ ಹದಗೆಟ್ಟ ಕಾರಣ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು.
ಅವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ, ಕೆ.ಎಫ್.ಡಿ. ಸ್ಥಾಪಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
Kshetra Samachara
22/12/2020 01:33 pm