ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೆಲ್ಯಾಡಿ ಗ್ರಾಪಂ ಅಭ್ಯರ್ಥಿ ಅಬ್ದುಲ್ ಹಮೀದ್ ಹೃದಯಾಘಾತದಿಂದ ನಿಧನ

ನೆಲ್ಯಾಡಿ : ಡಿ.27ರಂದು ನಡೆಯಲಿದ್ದ 2ನೇ ಹಂತದ ಗ್ರಾ.ಪಂ. ಚುನಾವಣೆಯಲ್ಲಿ ನೆಲ್ಯಾಡಿ ಗ್ರಾ.ಪಂ. 2ನೇ ವಾರ್ಡ್‌ನ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದ ನೆಲ್ಯಾಡಿ ಗ್ರಾಮದ ಮೊರಂಕಳ ನಿವಾಸಿ ಅಬ್ದುಲ್ ಹಮೀದ್ ಪೈಂಟರ್(60) ಅವರು ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು.

ಮಂಗಳವಾರ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಅವರಿಗೆ ತಡರಾತ್ರಿ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಮನೆಯವರು ತಕ್ಷಣ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತೆಯೇ ದಾರಿ ಮಧ್ಯೆ ಅಸುನೀಗಿದರು.

ಅಬ್ದುಲ್ ಹಮೀದ್‌ ಕಳೆದ ಅವಧಿಯಲ್ಲಿ ನೆಲ್ಯಾಡಿ ಗ್ರಾ.ಪಂ.ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿದ್ದರು. ಆದರೆ, ಈ ಬಾರಿ ಅವರು ಬಿಜೆಪಿಗೆ ಸೇರ್ಪಡೆಗೊಂಡು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಅವರು ಉತ್ತಮ ಆರ್ಟಿಸ್ಟ್ ಆಗಿದ್ದು ಗೋಡೆ ಬರಹ, ನಾಮಫಲಕ ಬರೆಯುವ ಕೆಲಸ ಮಾಡುತ್ತಿದ್ದರು. ದಿವಂಗತರ ಮನೆಗೆ ಹಲವು ಗಣ್ಯರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

23/12/2020 11:03 am

Cinque Terre

8.4 K

Cinque Terre

0

ಸಂಬಂಧಿತ ಸುದ್ದಿ