ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿಂಗಯ್ಯ ಅಧಿಕಾರ ಸ್ವೀಕರಿಸಿದರು.
ನಿಂಗಯ್ಯ ಅವರು ಈ ಹಿಂದೆ ಬೆಂಗಳೂರಿನ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಕಾರ್ಯ ನಿರ್ವಹಿಸುತಿದ್ದರು. ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಈ ಹಿಂದಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್. ಅವರಿಂದ ಅಧಿಕಾರ ಸ್ವೀಕರಿಸಿದರು.
ರವೀಂದ್ರ ಅವರು ಶ್ರೀ ಕಂಠೇಶ್ವರ ದೇವಸ್ಥಾನ ನಂಜನಗೂಡಿಗೆ ವರ್ಗಾವಣೆಗೊಂಡಿದ್ದಾರೆ. ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಕಚೇರಿ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಶಿಷ್ಟಾಚಾರ ವಿಭಾಗ ಮುಖ್ಯಸ್ಥ ಜಯರಾಮ ರಾವ್, ಸಿಬ್ಬಂದಿ ಉಪಸ್ಥಿತರಿದ್ದರು.
Kshetra Samachara
25/12/2020 08:24 pm