ಕೊಣಾಜೆ : ಬೆಳ್ಮ ದೋಟ ಜುಮಾ ಮಸೀದಿಯಲ್ಲಿ ಇಪ್ಪತ್ತು ವರ್ಷಗಳಿಂದ ಅಧ್ಯಕ್ಷರಾಗಿದ್ದ ಬಿ. ಮುಹಮ್ಮದ್ (65) ಅವರು ಅಲ್ಪಕಾಲದ ಅನಾರೋಗ್ಯದಿಂದ ದೇರಳಕಟ್ಟೆಯ ಖಾಸಗಿ ಅಸ್ಪತ್ರೆಯಲ್ಲಿ ತಡರಾತ್ರಿ ನಿಧನರಾಗಿದ್ದಾರೆ.
ಮೃತರು ಪತ್ನಿ, ಮಂಗಳೂರು ಯೂತ್ ಕಾಂಗ್ರೆಸ್ ಅಧ್ಯಕ್ಷ ರವೂಫ್ ಸಿ.ಎಂ ಹಾಗೂ ಬೆಳ್ಮ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಸತ್ತಾರ್ ಸಿ.ಎಂ. ಸಹಿತ ಐವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Kshetra Samachara
13/01/2021 01:14 pm