ಮಂಗಳೂರು: ಜಾಗತಿಕ ಬಂಟ ಪ್ರತಿಷ್ಠಾನ ಕೊಡಮಾಡುವ ಡಾ.ಡಿ.ಕೆ. ಚೌಟ ದತ್ತಿನಿಧಿ ವತಿಯಿಂದ ಹಿರಿಯ ಯಕ್ಷಗಾನ ಕಲಾವಿದರಿಗೆ ನೀಡುವ 2020-21ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಬಡಗು ತಿಟ್ಟಿನ ಪ್ರಸಿದ್ಧ ಸ್ತ್ರೀವೇಷಧಾರಿ ರಾಜೀವ ಶೆಟ್ಟಿ ಹೊಸಂಗಡಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ , ಪಂಚ ಮೇಳಗಳ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ ಮತ್ತು ನಿವೃತ್ತ ಪ್ರಾಚಾರ್ಯ ಪ್ರೊ.ಜಿ.ಆರ್. ರೈ ಅವರನ್ನೊಳಗೊಂಡ ಸಮಿತಿಯು ಈ ಆಯ್ಕೆ ನಡೆಸಿದೆ.
ಡಿ.ಕೆ.ಚೌಟ ದತ್ತಿನಿಧಿ ಪ್ರಶಸ್ತಿಯು 20 ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕವನ್ನೊಳಗೊಂಡಿದ್ದು, ಜ.23ರಂದು ನಗರದ ಮೋತಿ ಮಹಲ್ ಸಭಾಂಗಣದಲ್ಲಿ ಜರುಗುವ ಜಾಗತಿಕ ಬಂಟ ಫೌಂಡೇಶನ್ ಟ್ರಸ್ಟ್ ನ 24ನೇ ವಾರ್ಷಿಕ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ವೈ.ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
Kshetra Samachara
13/01/2021 01:55 pm