ಬಂಟ್ವಾಳ: ಬಂಟ್ವಾಳ ತಾಲೂಕಿನ ಪ್ರತಿ ಗ್ರಾಮ ಪಂಚಾಯತ್ ಗಳಿಗೆ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ನಿಯೋಗ ಭೇಟಿ ನೀಡಿ ಪರಿಶೀಲನೆ ಮಾಡುವ ಕಾರ್ಯದ ಭಾಗವಾಘಿ ಕುಕ್ಕಿಪಾಡಿ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ 14 ನೇ ಹಣಕಾಸು. ಮತ್ತು 15 ನೇ ಹಣಕಾಸು ಯೋಜನೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬದಿಸಿದಂತೆ ವಿಚಾರ ವಿನಿಮಯ ನಡೆಸಿದರು.
ಅಧ್ಯಕ್ಷ ರೊಂದಿಗೆ ಉಪಾಧ್ಯಕ್ಷರಾದ ಅಬ್ಬಾಸ್ ಆಲಿ.ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಪಂಚಾಯತ್ ಆಡಳಿತ ಅಧಿಕಾರಿ ಪ್ರದೀಪ್ ಡಿ'ಸೋಜ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಅಜಿತ್, ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ತುಳಸಿ ಸ್ವಾಗತಿಸಿ ಪ್ರಗತಿ ವರದಿ ನೀಡಿದರು.
Kshetra Samachara
14/10/2020 06:19 pm