ಬಂಟ್ವಾಳ: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಗ್ರಾಮದ ಅಭಿವೃದ್ಧಿಗಾಗಿ ಅನುದಾನದ ಜೊತೆ ಉತ್ತಮ ಯೋಜನೆ ಗಳನ್ನು ಜಾರಿಮಾಡುತ್ತಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.
ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ವಿಟ್ಲಪಡ್ನೂರು, ಕೊಳ್ನಾಡು ಹಾಗೂ ಸಾಲೆತ್ತೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 27 ಕೋಟಿಗೂ ಮಿಕ್ಕಿದ ಕಾಮಗಾರಿ ಗಳ ಉದ್ಘಾಟನೆ, ಶಿಲಾನ್ಯಾಸ ಹಾಗೂ ಕಾಮಗಾರಿಗಳ ವೀಕ್ಷಣೆ ನಡೆಸಿ ಮಾತನಾಡಿದರು. ಈ ಸಂದರ್ಭ ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ , ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರವಿಶ್ ಶೆಟ್ಟಿ ಮತ್ತಿತರರು ಇದ್ದರು.
Kshetra Samachara
20/10/2020 08:00 pm