ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಘನ ತ್ಯಾಜ್ಯ ವಿಲೇವಾರಿ ಘಟಕದ ಏಕರೂಪ ಬ್ರ್ಯಾಂಡಿಂಗ್ ಲೋಕಾರ್ಪಣೆ

ಪುತ್ತೂರು: ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ "ಸ್ವಚ್ಛೋತ್ಸವ- ನಿತ್ಯೋತ್ಸವ" ಮಾಸಾಚರಣೆ ಪ್ರಯುಕ್ತ ಘನ ತ್ಯಾಜ್ಯ ವಿಲೇವಾರಿ ಘಟಕದ ಏಕರೂಪದ ಬ್ರ್ಯಾಂಡಿಂಗ್ ಲೋಕಾರ್ಪಣೆ ಪುತ್ತೂರಿನಲ್ಲಿ ನಡೆಯಿತು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದ.ಕ. ಜಿಪಂ, ಪುತ್ತೂರು ತಾಪಂ, ಹಿರೇಬಂಡಾಡಿ ಗ್ರಾಪಂ ಸಹಯೋಗದಲ್ಲಿ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಭಾಗವಹಿಸಿ ಮಾತನಾಡಿದರು. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸದಸ್ಯರಾದ ಶಯನ ಜಯಾನಂದ, ತಾಪಂ ಸದಸ್ಯರಾದ ಮುಕುಂದ ಬಜತ್ತೂರು, ಹಿರೇಬಂಡಾಡಿ ಗ್ರಾಪಂ ನಿಕಟಪೂರ್ವ ಅಧ್ಯಕ್ಷ ಶೌಕತ್ ಅಲಿ, ತಾಪಂ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ, ಪಂ. ಆಡಳಿತಾಧಿಕಾರಿ ಧರ್ಮಪಾಲ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

28/10/2020 10:26 am

Cinque Terre

7.78 K

Cinque Terre

0

ಸಂಬಂಧಿತ ಸುದ್ದಿ