ಮುಲ್ಕಿ: ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ ವತಿಯಿಂದ ಅನಾರೋಗ್ಯ ಪೀಡಿತರಿಗೆ ಸ್ಪಂದನ ಸಹಾಯ ಹಸ್ತ ನೀಡುವ ಕಾರ್ಯಕ್ರಮದಲ್ಲಿ ಅನಾರೋಗ್ಯ ಪೀಡಿತ ತಲಾ 3 ಕುಟುಂಬಗಳಿಗೆ 1.5 ಲಕ್ಷ ರೂ.ನ ಚೆಕ್ ನ್ನು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಮತ್ತು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ ಮೇಯರ್ ದಿವಾಕರ್ ಪಾಂಡೇಶ್ವರ್ ವಿತರಿಸಿದರು.
ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಲ್ಲಾಳ್ ಭಾಗ್, ಅಧ್ಯಕ್ಷ ರಾಕೇಶ್ ಪೂಜಾರಿ, ಕುದ್ರೋಳಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್. ಸಾಯಿ ರಾಂ, ಮುಡಾ ಅಧ್ಯಕ್ಷ ರವಿ ಶಂಕರ್ ಮಿಜಾರ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
01/12/2020 12:46 pm