ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿ.ಸಿ.ರೋಡ್ : ಡಿ.25 ರಂದು ಕನ್ನಡದ ಕಲ್ಹಣ ನೀರ್ಪಾಜೆ ಪ್ರಶಸ್ತಿ ಪ್ರದಾನ; ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ಬಿ.ಸಿ.ರೋಡಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿ.25ರಂದು ಅಪರಾಹ್ನ ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ನಡೆಯಲಿರುವ ಕನ್ನಡದ ಕಲ್ಹಣ ನೀರ್ಪಾಜೆ ಪ್ರಶಸ್ತಿ ಪ್ರದಾನ ಹಾಗೂ ನೀರ್ಪಾಜೆ ಭೀಮ ಭಟ್ಟರ ಸಂಸ್ಮರಣೆ ಪುಸ್ತಕ ಬಿಡುಗಡೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಸನ್ನಿಧಿಯಲ್ಲಿ ಗುರುವಾರ ಸಂಜೆ ನಡೆಯಿತು.

ಆಮಂತ್ರಣ ಪತ್ರಿಕೆಯನ್ನು ಉದ್ಯಮಿ ಡಾ.ಎಸ್.ಎಂ.ಗೋಪಾಲಕೃಷ್ಣ ಆಚಾರ್ಯ ಬಿಡುಗಡೆಗೊಳಿಸಿದರು. ನಂದಾವರ ಕ್ಷೇತ್ರದ ಪ್ರಧಾನ ಅರ್ಚಕ ವೇ.ಮೂ.ಮಹೇಶ ಭಟ್ ಆಶೀರ್ವದಿಸಿದರು.

ಹಿರಿಯ ಅರ್ಥಧಾರಿ, ವಿದ್ವಾಂಸ, ಸಂಶೋಧಕ ಡಾ. ಎಂ.ಪ್ರಭಾಕರ ಜೋಷಿ ಅವರಿಗೆ ಪ್ರಶಸ್ತಿ ನೀಡಲಾಗುವುದು ಎಂದು ಪ್ರಾಸ್ತಾವಿಕವಾಗಿ ಮಾತನಾಡಿದ ಅಭಿಮಾನಿ ಬಳಗದ ಕೋಶಾಧಿಕಾರಿ ಎಸ್.ಗಂಗಾಧರ ಭಟ್ ಕೊಳಕೆ ಹೇಳಿದರು.

ಬಳಗದ ಅಧ್ಯಕ್ಷ ಸುದರ್ಶನ ಜೈನ್, ಕೋಶಾಧಿಕಾರಿ ಶಿವಶಂಕರ್, ಕಸಾಪ ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ, ಬಳಗದ ಸದಸ್ಯರಾದ ಕೃಷ್ಣ ಶರ್ಮ, ಮಹಾಬಲೇಶ್ವರ ಹೆಬ್ಬಾರ, ರವಿಕುಮಾರ್, ಸುಭಾಶ್ಚಂದ್ರ ಜೈನ್ ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

03/12/2020 06:37 pm

Cinque Terre

4.61 K

Cinque Terre

0

ಸಂಬಂಧಿತ ಸುದ್ದಿ