ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ನಿರ್ಗತಿಕರನ್ನು ಗುರುತಿಸಿ, ಸೂಕ್ತ ವ್ಯವಸ್ಥೆ ಕಲ್ಪಿಸಿ"

ಮಂಗಳೂರು: ನಿರ್ಗತಿಕರನ್ನು ಗುರುತಿಸಿ, ಅವರಿಗೆ ಸೂಕ್ತ ಚಿಕಿತ್ಸೆ ಹಾಗೂ ಆಶ್ರಯ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ನಗರ ವ್ಯಾಪ್ತಿಯ ನಿರಾಶ್ರಿತರಲ್ಲಿ ಮಲೇರಿಯಾ ಪ್ರಕರಣಗಳ ವರದಿ ಹಾಗೂ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕುರಿತ ಸಭೆ ಮತ್ತು ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿಲ್ಲೆಯ ಎಲ್ಲ ತಹಸೀಲ್ದಾರರು ಎಂಡೋಸಲ್ಫಾನ್ ಸಂತ್ರಸ್ತರಿಗೆ ಪ್ರತಿ ಮಾಹೆ ಪಿಂಚಣಿ ಪಾವತಿಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು.

ಬಾಕಿ ಇದ್ದರೆ ಅಂತವರ ಪಟ್ಟಿ ಮಾಡಿ ವರದಿ ನೀಡಬೇಕು. ಜಿಲ್ಲೆಯ 6 ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ನಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ವಿಶೇಷ ತಜ್ಞ ವೈದ್ಯರ ಶಿಬಿರವನ್ನು ಮುಂದಿನ ತಿಂಗಳಿನಿಂದ ಪ್ರಾರಂಭಿಸಿ ಸಂತ್ರಸ್ತರಿಗೆ ಚಿಕಿತ್ಸೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಡಿಎಚ್‌ಒ ರಾಮಚಂದ್ರ ಬಾಯರಿ, ಮಲೇರಿಯಾ ನಿಯಂತ್ರಣಾಧಿಕಾರಿ ನವೀನ್ ಚಂದ್ರ ಕುಲಾಲ್, ಸಾಮಾಜಿಕ ಭದ್ರತೆ ಸಹಾಯಕ ನಿರ್ದೇಶಕ ಎ.ಡಿ. ಬೋಪಯ್ಯ, ತಾಲೂಕು ವೈದ್ಯಾಧಿಕಾರಿ, ಸಮಾಜ ಕಲ್ಯಾಣ ಅಧಿಕಾರಿ, ತಹಸೀಲ್ದಾರ್ ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

04/12/2020 10:52 pm

Cinque Terre

12.44 K

Cinque Terre

1

ಸಂಬಂಧಿತ ಸುದ್ದಿ