ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಜಿಪಿಎಸ್ ಅಳವಡಿಸದ ಸಿಟಿ ಬಸ್‌ ಪರವಾನಿಗೆ ರದ್ದು; ಡಿ.ಸಿ. ಎಚ್ಚರಿಕೆ

ಮಂಗಳೂರು: ಜಿಪಿಎಸ್ ಅಳವಡಿಸದಿರುವ ಸಿಟಿ ಬಸ್‌ಗಳ ಪರವಾನಿಗೆ ರದ್ದುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಬಸ್ ಮಾಲಕರಿಗೆ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾರಿಗೆ ಪ್ರಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಯಾಣಿಕರ ಸುರಕ್ಷತೆ ದೃಷ್ಟಿಯಲ್ಲಿ ಸಿಟಿ ಬಸ್‌ಗಳಲ್ಲಿ ಜಿಪಿಎಸ್ ಅಳವಡಿಕೆ ಕಡ್ಡಾಯ.

ಮುಂದಿನ 15 ದಿನಗಳೊಳಗಾಗಿ ಜಿಪಿಎಸ್ ಅಳವಡಿಸದಿದ್ದ ಪಕ್ಷದಲ್ಲಿ ಅಂತಹ ಬಸ್‌ಗಳನ್ನು ಗುರುತಿಸಿ, ಪರವಾನಿಗೆ ರದ್ದುಗೊಳಿಸುವ ಜೊತೆಗೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದರು.

ಮಂಗಳೂರು ನಗರ ವ್ಯಾಪ್ತಿಯಲ್ಲಿ 320 ಬಸ್‌ಗಳು ಸಂಚರಿಸುತ್ತಿದ್ದು, ಈ ಪೈಕಿ 70 ಬಸ್‌ಗಳಲ್ಲಿ ಮಾತ್ರ ಜಿಪಿಎಸ್ ಅಳವಡಿಸಲಾಗಿದೆ.

ಮಂಗಳೂರು ಆರ್‌ಟಿಒ ವರ್ಣೇಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀ ಪ್ರಸಾದ್, ಮಹಾನಗರ ಪಾಲಿಕೆ ಉಪ ಆಯುಕ್ತ ಸಂತೋಷ್ ಕುಮಾರ್, ಸಂಚಾರ ಪೊಲೀಸ್ ಎಸಿಪಿ ನಟರಾಜ್ ಮತ್ತಿತರರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

04/12/2020 11:02 pm

Cinque Terre

6.6 K

Cinque Terre

1

ಸಂಬಂಧಿತ ಸುದ್ದಿ