ಮುಲ್ಕಿ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯರ ಹೆಸರಿಡುವ ಪ್ರಸ್ತಾವವನ್ನು ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದಿಸಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ಕರಾವಳಿಯ ಶಾಸಕರು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇಂದು ಮನವಿ ಸಲ್ಲಿಸಿದರು. ನಿಯೋಗದಲ್ಲಿ ಶಾಸಕರಾದ ಸುನೀಲ್ ಕುಮಾರ್, ಡಾ.ವೈ. ಭರತ್ ಶೆಟ್ಟಿ, ರಘುಪತಿ ಭಟ್, ಸಂಜೀವ ಮಠಂದೂರು, ವೇದವ್ಯಾಸ ಕಾಮತ್, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.
Kshetra Samachara
10/12/2020 08:17 pm