ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇತಿಹಾಸದ ವೀರ ಪುರುಷರಾದ ಕೋಟಿ-ಚೆನ್ನಯ್ಯರ ಹೆಸರು ನಾಮಕರಣ ಮಾಡಬೇಕೆಂದು ಒತ್ತಾಯಿಸಿ, ಅವಿಭಜಿತ ದಕ್ಷಿಣ ಕನ್ನಡ - ಉಡುಪಿ ಜಿಲ್ಲೆಯ ಶಾಸಕರ ನಿಯೋಗ ಮಾನ್ಯ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ವಿಧಾನ ಸಭೆಯ ಮುಖ್ಯ ಸಚೇತಕರಾದ ಸುನೀಲ್ ಕುಮಾರ್ ಕಾರ್ಕಳ, ಶಾಸಕರಾದ ಸಂಜೀವ ಮಠಂದೂರು, ರಾಜೇಶ್ ನಾಯ್ಕ್, ರಘುಪತಿ ಭಟ್, ಶ್ರೀ ಉಮಾನಾಥ್ ಕೋಟ್ಯಾನ್, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಹರೀಶ್ ಪೂಂಜಾ ಉಪಸ್ಥಿತರಿದ್ದರು.
Kshetra Samachara
11/12/2020 10:39 am