ಬಂಟ್ವಾಳ: ವಿಟ್ಲದಲ್ಲಿರುವ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಡಿ.16ರಂದು ರೈತಸಂಘ, ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಯಲಿದ್ದು, ಇದಕ್ಕೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ.
ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಸುರೇಶ್ ಭಟ್ ಕೊಜಂಬೆ ಶನಿವಾರ ವಿಟ್ಲದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬಿಲ್ ಪಾವತಿಸದಿದ್ದರೆ ನೋಟೀಸ್ ಕೂಡ ನೀಡದೆ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗುತ್ತಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ನಿಯಮಗಳನ್ನು ಉಲ್ಲಂಘಿಸಿ ಗ್ರಾಹಕರ ಮೇಲೆ ದೌರ್ಜನ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಮುಖಂಡ, ಜಿಪಂ ಸದಸ್ಯ ಎಂ. ಎಸ್. ಮಹಮ್ಮದ್ ಮಾತನಾಡಿ, ಮೆಸ್ಕಾಂ ಎಂಬುದು ಗೊಂದಲದ ಇಲಾಖೆಯಾಗಿದೆ. ಜನರು ಎಚ್ಚರ ವಹಿಸದೆ ಗಾಢನಿದ್ದೆಯಲ್ಲಿದ್ದಾರೆ. ಇಂತಹ ಸಂದರ್ಭ ರೈತ ಸಂಘ ಮುಂದೆ ಬಂದು ಪ್ರತಿಭಟನೆ ನಡೆಸಲು ಬಂದಿದೆ. ಇದಕ್ಕೆ ಜನರ ಬೆಂಬಲ ನೀಡುವ ಅಗತ್ಯವಿದೆ. ಪಕ್ಷದ ಸಂಪೂರ್ಣ ಬೆಂಬಲ ಇದೆ ಎಂದರು. ಜಿಲ್ಲಾ ಸಂಚಾಲಕ ರೂಪೇಶ್ ರೈ ಅಲಿಮಾರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಭಟ್ ಪಾದೆಕಲ್ಲು ಉಪಸ್ಥಿತರಿದ್ದರು.
Kshetra Samachara
12/12/2020 09:15 pm