ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಫಿಟ್ ಇಂಡಿಯಾ ಶಾಲಾ ಸಪ್ತಾಹಕ್ಕೆ ಚಾಲನೆ

ಬಂಟ್ಚಾಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬಂಟ್ವಾಳ ಸಹಯೋಗದಲ್ಲಿ ಫಿಟ್ ಇಂಡಿಯಾ ಶಾಲಾ ಸಪ್ತಾಹಕ್ಕೆ ಬಿ.ಸಿ.ರೋಡಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಸೋಮವಾರ ಚಾಲನೆ ನೀಡಲಾಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಸದೃಢ ಮನಸ್ಸು ಮತ್ತು ದೇಹ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ.

ಮಕ್ಕಳ ಮಾನಸಿಕ ವಿಕಾಸವಾಗಬೇಕಾದರೆ ದೈಹಿಕ ಶಿಕ್ಷಣ ಅಗತ್ಯ. ಬಂಟ್ವಾಳ ತಾಲೂಕಿನಲ್ಲಿ ಫಿಟ್ ಇಂಡಿಯಾ ಶಾಲಾ ಸಪ್ತಾಹದನ್ವಯ ಮಕ್ಕಳ ದೈಹಿಕ ಶಿಕ್ಷಣದ ಚಟುವಟಿಕೆ ಕುರಿತು ಆನ್ ಲೈನ್ ಮೂಲಕ ಮಾಹಿತಿ ನೀಡುವ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ತಾಪಂ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ, ವಿದ್ಯಾರ್ಥಿಗಳು ಮಾನಸಿಕ, ದೈಹಿಕವಾಗಿ ಸದೃಢವಾಗುವುದರ ಹಿಂದೆ ದೈಹಿಕ ಶಿಕ್ಷಣ ಶಿಕ್ಷಕರ ಮಹತ್ವದ ಪಾತ್ರವಿದೆ ಎಂದರು.

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಸಂಚಾಲಕ ಜೆ. ಪ್ರಹ್ಲಾದ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕ ಪರಿವೀಕ್ಷಣಾಧಿಕಾರಿ ರತ್ನಾವತಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಎನ್.ಪಿ.ಎಸ್. ನೌಕರರ ಸಂಘದ ಅಧ್ಯಕ್ಷ ಸಂತೋಷ್, ಭಡ್ತಿ ಹೊಂದಿದ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಲೋಕೇಶ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಜಗದೀಶ್, ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜತ್ತಪ್ಪ ಗೌಡ, ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಇಂದುಶೇಖರ, ಕ್ಷೇತ್ರ ಸಮನ್ವಯಾಧಿಕಾರಿ ರಾಘವೇಂದ್ರ ಬಲ್ಲಾಳ್,

ಶಿಕ್ಷಣ ಸಂಯೋಜಕಿಯರಾದ ಸುಜಾತಾ, ಸುಧಾ, ಯುವಜನ ಸೇವಾ ಕ್ರೀಡಾಧಿಕಾರಿ ನವೀನ್ ಪಿ.ಎಸ್., ಪಾಣೆಮಂಗಳೂರು ಶಾರದಾ ಪ್ರೌಢಶಾಲಾ ಮುಖ್ಯ ಶಿಕ್ಷಕ ಭೋಜ, ದೈಹಿಕ ಶಿಕ್ಷಕರ ಸಂಘದ ಕಾರ್ಯದರ್ಶಿ

ಜಯರಾಮ್ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚಿನ್ನಪ್ಪ ಜಾಲ್ಸೂರು ಸ್ವಾಗತಿಸಿದರು. ಉಪಾಧ್ಯಕ್ಷ ಜಗದೀಶ್ ವಂದಿಸಿದರು. ಶಿಕ್ಷಕ ಕೃಷ್ಣಪ್ರಸಾದ್ ನಿರೂಪಿಸಿದರು.

Edited By : Nirmala Aralikatti
Kshetra Samachara

Kshetra Samachara

14/12/2020 06:02 pm

Cinque Terre

6.13 K

Cinque Terre

0

ಸಂಬಂಧಿತ ಸುದ್ದಿ