ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮರಕಡ: ಶಾಲಾ ನೂತನ ಕಟ್ಟಡ ಶಾಸಕರಿಂದ ಉದ್ಘಾಟನೆ

ಮುಲ್ಕಿ: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮರಕಡದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಮಾದರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದು, ಅದರ ಅಭಿವೃದ್ಧಿಯ ದೃಷ್ಟಿಯಿಂದ ಎಂಸಿಎಫ್ ಕಂಪೆನಿಯ ಸಹಯೋಗದೊಂದಿಗೆ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡವನ್ನು ಶಾಸಕ ಡಾ.ವೈ. ಭರತ್ ಶೆಟ್ಟಿ ಗುರುವಾರ ಉದ್ಘಾಟಿಸಿದರು.

ಎಂಸಿಎಫ್ ಸಂಸ್ಥೆಯ ಸಾಮಾಜಿಕ ಬದ್ಧತಾ ನಿಧಿಯಡಿಯಲ್ಲಿ 15 ಲಕ್ಷ ರೂ. ಅನುದಾನದಲ್ಲಿ ಈ ಕಟ್ಟಡ ನಿರ್ಮಿಸಲಾಗಿದೆ.

ಕಾರ್ಯಕ್ರಮದಲ್ಲಿ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್, ಪಾಲಿಕೆ ಸದಸ್ಯ ಲೋಹಿತ್ ಅಮೀನ್, ಎಂಸಿ ಎಫ್ ನಿರ್ದೇಶಕರಾದ ಪ್ರಭಾಕರ್ ರಾವ್ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು,ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

17/12/2020 04:12 pm

Cinque Terre

9.22 K

Cinque Terre

1

ಸಂಬಂಧಿತ ಸುದ್ದಿ