ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮರಕೊಗು ಆವಾತೊ ಮರ್ಹೂಂ ಬ್ಯಾರಿಙ’ ಗ್ರಂಥ, ‘ಬ್ಯಾರಿ ಹಿರಿಯಙಲೊ ಕಲ್ಬು ನೊರಞೊ ಪಲಕ’ ಡಿವಿಡಿ ಬಿಡುಗಡೆ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಹೊರತಂದ ‘ಮರಕೊಗು ಆವಾತೊ ಮರ್ಹೂಂ ಬ್ಯಾರಿಙ’ (ಮರೆಯಲಾಗದ ದಿವಂಗತ ಬ್ಯಾರಿ ಮಹನೀಯರು) ಗ್ರಂಥ ಮತ್ತು ‘ಬ್ಯಾರಿ ಹಿರಿಯಙಲೊ ಕಲ್ಬು ನೊರಞೊ ಪಲಕ’ (ಬ್ಯಾರಿ ಹಿರಿಯರ ಮನದಾಳದ ಮಾತು) ಸಾಕ್ಷ್ಯಚಿತ್ರ ಡಿವಿಡಿ ಬಿಡುಗಡೆ ಹೋಟೆಲ್ ಶ್ರೀನಿವಾಸ್ ಸಭಾಂಗಣದಲ್ಲಿ ಜರುಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್, ಬ್ಯಾರಿ ಮುಸ್ಲಿಂ ಸಮುದಾಯದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆಗೈದ ಸಾಕಷ್ಟು ಮಂದಿಯಿದ್ದಾರೆ.

ಆ ಪೈಕಿ ಮೊದಲ ಸಂಪುಟದಲ್ಲಿ ಅಗಲಿದ 123 ಮಂದಿಯ ಪರಿಚಯಾತ್ಮಕ ಲೇಖನಗಳನ್ನು ಒಳಗೊಂಡ ಗ್ರಂಥ ಹೊರಗೆ ತಂದಿರುವುದು ಶ್ಲಾಘನೀಯ ಎಂದರು.

‘ಮರೆಯಲಾಗದ ಗ್ರಂಥ’ವನ್ನು ಅಕ್ಷರ ಸಂತ ಹರೇಕಳ ಹಾಜಬ್ಬ ಬಿಡುಗಡೆಗೊಳಿಸಿದರು. ‘ಬ್ಯಾರಿ ಹಿರಿಯರ ಮನದಾಳದ ಮಾತು’ ಸಾಕ್ಷ್ಯಚಿತ್ರವನ್ನು ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಬಿಡುಗಡೆಗೊಳಿಸಿದರು.

ಅಧ್ಯಕ್ಷತೆಯನ್ನು ಬ್ಯಾರಿ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ವಹಿಸಿದ್ದರು.

ಬ್ಯಾರಿ ಕಲಾರಂಗದ ಅಧ್ಯಕ್ಷ ಅಝೀಝ್ ಬೈಕಂಪಾಡಿ, ಮಂಗಳೂರು ವಿವಿ ಬ್ಯಾರಿ ಅಧ್ಯಯನ ಪೀಠದ ಮುಖ್ಯಸ್ಥ ಡಾ.ಅಬೂಬಕ್ಕರ್ ಸಿದ್ದೀಕ್, ಬ್ಯಾರಿ ಅಧ್ಯಯನ ಪೀಠದ ಸದಸ್ಯ ಎಂ. ಅಹ್ಮದ್ ಬಾವ ಮೊಹಿದಿನ್ ಪಡೀಲ್ ಮೊದಲಾದವರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

19/12/2020 12:30 pm

Cinque Terre

6.25 K

Cinque Terre

0

ಸಂಬಂಧಿತ ಸುದ್ದಿ