ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಭಾರೀ ಮಳೆಗೆ ಶಿಥಿಲಗೊಂಡ ಶಾಲಾ ಕಟ್ಟಡ ಕುಸಿತ, ತಪ್ಪಿದ ದುರಂತ

ಭಾರೀ ಮಳೆಗೆ ಶಿಥಿಲಗೊಂಡಿದ್ದ ಮಂಗಳೂರು ನಗರ ಹೊರವಲಯದ ತಲಪಾಡಿ ಬಳಿಯ ಕಿನ್ಯ ಗ್ರಾಮದ ಬೆಳರಿಂಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವು ಧರೆಗುರುಳಿದೆ.

ಕಿನ್ಯ ಗ್ರಾಮದ ಬೆಳರಿಂಗೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 127 ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ. ಶಾಲಾ ಕಟ್ಟಡವು ಶಿಥಿಲಾವಸ್ಥೆಯಲ್ಲಿರುವ ಬಗ್ಗೆ ಕಳೆದ ವರ್ಷವೇ ಹಲವು ಬಾರಿ ಶಿಕ್ಷಣ ಇಲಾಖಾಧಿಕಾರಿಗಳಿಗೆ ಶಾಲಾಭಿವೃದ್ಧಿ ಸಮಿತಿಯವರು ದೂರು ನೀಡಿದ್ದರು. ಈ ಸಂದರ್ಭ ಸ್ಥಳಕ್ಕೆ ಪರಿಶೀಲನೆಗೆ ಬಂದಿದ್ದ ಜಿಲ್ಲಾ ಪಂಚಾಯತ್ ಇಂಜಿನಿಯರ್ ನಿತಿನ್ ಎಂಬುವರು ಕಟ್ಟಡ ಗಟ್ಟಿ ಮುಟ್ಟಾಗಿದೆ ಎಂದು ಸರ್ಟಿಫಿಕೇಟ್ ನೀಡಿ ವಾಪಸ್‌ ಆಗಿದ್ದಾರೆ ಎಂದು ಸ್ಥಳೀಯರಿಂದ ಆರೋಪ ವ್ಯಕ್ತವಾಗಿದೆ.

ಅಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮ ಮೊದಲ ಮಳೆಗೇ ಶಿಥಿಲಗೊಂಡಿದ್ದ ಶಾಲಾ ಕಟ್ಟಡದ ಹಂಚಿನ ಮೇಲ್ಛಾವಣಿ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಕಟ್ಟಡ ಶಿಥಿಲಗೊಂಡಿರುವುದನ್ನು ಗಮನಿಸಿದ್ದ ಶಾಲಾಭಿವೃದ್ಧಿ ಸಮಿತಿಯವರು ಸೋಮವಾರ ಆ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ತರಗತಿ ನೀಡದೆ ಪಕ್ಕದ ಮದರಸ ಕಟ್ಟಡದಲ್ಲಿ ತರಗತಿ ನಡೆಸಿ ಮುಂಜಾಗರೂಕತೆ ವಹಿಸಿದ್ದರು. ಘಟನಾ ಸ್ಥಳಕ್ಕೆ ಕಿನ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Edited By :
Kshetra Samachara

Kshetra Samachara

18/05/2022 06:11 pm

Cinque Terre

9.65 K

Cinque Terre

0

ಸಂಬಂಧಿತ ಸುದ್ದಿ