ಮೂಡುಬಿದಿರೆ: ಇಲ್ಲಿನ ಕೀರ್ತಿನಗರ ಅಭಿವೃದ್ಧಿ ಸಮಿತಿಯ ವಾರ್ಷಿಕೋತ್ಸವ ಸಮಾರಂಭವು ಕೀರ್ತಿನಗರದ ರೋಟರಿ ಟೆಂಪಲ್ ಟೌನ್ ಪಾರ್ಕ್‌ನಲ್ಲಿ ಭಾನುವಾರ ಸಂಜೆ ನಡೆಯಿತು.
ಶಾಸಕ ಉಮಾನಾಥ ಕೋಟ್ಯಾನ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೂಡುಬಿದಿರೆ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಪುರಸಭಾ ಸದಸ್ಯೆ ಜಯಶ್ರೀ ಕೇಶವ, ಮೂಡುಬಿದಿರೆ ರೋಟರಿ ಕ್ಲಬ್ ಆಫ್ ಟೆಂಪಲ್ ಟೌನ್‌ನ ಅಧ್ಯಕ್ಷ ರಮೇಶ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.
ಇದಕ್ಕೂ ಮೊದಲು ಕೀರ್ತಿನಗರ ವೃತ್ತದ ಬಳಿ ಹೈಮಾಸ್ಟ್ ದೀಪ ಮತ್ತು ಸಿಸಿಟಿವಿ ಕ್ಯಾಮೆರಾವನ್ನು ಉಮಾನಾಥ ಕೋಟ್ಯಾನ್ ಅವರು ಉದ್ಘಾಟಿಸಿದರು.
ಕೀರ್ತಿನಗರ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜೇಶ್ ಬಂಗೇರಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಂಗೀತ ಪ್ರಭು ಕಾರ್ಯಕ್ರಮ ನಿರೂಪಿಸಿದರು. ಸಮಿತಿಯ ಕಾರ್ಯದರ್ಶಿ ರತ್ನಾಕರ ಹೆಗ್ಗಡೆ ಕಟ್ಟೆ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕಲ್ಲಡ್ಕ ವಿಠ್ಠಲ್ ನಾಯಕ್ ಬಳಗದಿಂದ ಗೀತ ಸಾಹಿತ್ಯ ಸಂಭ್ರಮ ನಡೆಯಿತು.
Kshetra Samachara
15/05/2022 10:56 pm