ಸಂಪೂರ್ಣ ಸುರಕ್ಷಾ ಯೋಜನೆಯಡಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡಲಾದ ಸಿ.ಟಿ.ಸ್ಕ್ಯಾನ್ ಯಂತ್ರದ ಹಸ್ತಾಂತರ ಕಾರ್ಯಕ್ರಮ ಮಾರ್ಚ್ 30 ರಂದು ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಪ್ರಗತಿ ಆಸ್ಪತ್ರೆಯ ನಿರ್ದೇಶಕ ಶ್ರೀಪತಿ ರಾವ್ ತಿಳಿಸಿದರು.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿ.ಎಸ್.ಸಿ ಫಂಡ್ ಮೂಲಕ ರಾಜ್ಯದ ನಾಲ್ಕು ಆಸ್ಪತ್ರೆಗಳಿಗೆ ವೈದ್ಯಕೀಯ ದೃಷ್ಟಿಯಲ್ಲಿ ಅತ್ಯಂತ ಉಪಯೋಗಿಯಾದ 32 ಸ್ಲಾಬ್ ಸಿ.ಟಿ ಸ್ಕ್ಯಾನ್ ಯಂತ್ರವನ್ನು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪುತ್ತೂರು ಪ್ರಗತಿ ಆಸ್ಪತ್ರೆಗೆ ನೀಡಲಾಗಿದೆ. ಸುಮಾರು 2 ಕೋಟಿ ರೂಪಾಯಿ ವೆಚ್ಚದ ಈ ಯಂತ್ರವನ್ನು ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಸಿಗಬೇಕು ಎನ್ನುವ ಹಿತದೃಷ್ಟಿಯಿಂದ ನೀಡಲಾಗಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆ ಯಂತ್ರವನ್ನು ಆಸ್ಪತ್ರೆಗೆ ಹಸ್ತಾಂತರಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
Kshetra Samachara
29/03/2022 05:33 pm