ಮಂಗಳೂರು: ಕಾಸರಗೋಡು ಜಿಲ್ಲೆ ಜನತೆಯ ಬಹು ನಿರೀಕ್ಷಿತ ಮಂಜೇಶ್ವರ ಬಂದರನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅ.1ರಂದು ಉದ್ಘಾಟಿಸಲಿದ್ದಾರೆ.
ಬೆಳಗ್ಗೆ 10:30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ ಮುಖ್ಯಮಂತ್ರಿಯವರು ವೀಡಿಯೊ ಕಾನ್ಫರೆನ್ಸ್ ಮೂಲಕ ಬಂದರಿಗೆ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಮೀನುಗಾರಿಕೆ ಸಚಿವ ಗಿರಿರಾಜ್ ಸಿಂಗ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅಲ್ಲದೆ, ರಾಜ್ಯ ಮೀನುಗಾರಿಕೆ ಸಚಿವೆ ಮೆರ್ಸಿ ಕುಟ್ಟಿಯಮ್ಮ ಅಧ್ಯಕ್ಷತೆ ವಹಿಸುವರು. ಕಂದಾಯ ಸಚಿವ ಇ.ಚಂದ್ರಶೇಖರನ್, ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಶಾಸಕ ಎಂ.ಸಿ. ಕಮರುದ್ದೀನ್ ಮೊದಲಾದವರು ಉಪಸ್ಥಿತರಿರುವರು.
Kshetra Samachara
26/09/2020 09:21 pm