ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶ ಹೆಜಮಾಡಿ ಟೋಲ್ ನಲ್ಲಿ ಮುಲ್ಕಿ ಪರಿಸರದ ನಾಗರಿಕರಿಗೆ ವಿನಾಯಿತಿ ನೀಡಬೇಕೆಂದು ಅಭಿವೃದ್ಧಿ ನಾಗರಿಕ ಸಮಿತಿಯು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿತು. ಮುಲ್ಕಿ ಅಭಿವೃದ್ಧಿ ನಾಗರಿಕ ಸಮಿತಿಯ ಅಧ್ಯಕ್ಷ ಹರೀಶ್ ಪುತ್ರನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರನ್ನು ಭೇಟಿ ಮಾಡಿ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ಕಾಮಗಾರಿ ಸ್ಥಿತಿಗತಿ ಹಾಗೂ ಹೆಜಮಾಡಿಯಿಂದ ಮುಲ್ಕಿಗೆ ಕೇವಲ ಐದು ಕಿಲೋಮೀಟರ್ ಇರುವುದರಿಂದ ಟೋಲ್ ಗೇಟ್ ನಲ್ಲಿ ಮುಲ್ಕಿ ನಾಗರಿಕರಿಗೆ ರಿಯಾಯಿತಿ ನೀಡಲು ವಿನಂತಿಸಿದರು.
ಕಳೆದ ಹಲವಾರು ವರ್ಷಗಳಿಂದ ಮುಲ್ಕಿಯಲ್ಲಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಅವ್ಯವಸ್ಥೆಯಿಂದ ಅನೇಕ ಅಪಘಾತಗಳು ಸಂಭವಿಸಿದೆ. ಅವ್ಯವಸ್ಥೆ ಬಗ್ಗೆ ಸಂಬಂಧಪಟ್ಟ ಹೆದ್ದಾರಿ ಇಲಾಖೆಗೆ ಅನೇಕ ಬಾರಿ ಮನವಿ ಮಾಡಿದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮನವಿ ಸ್ವೀಕರಿಸಿ ಜಿಲ್ಲಾಧಿಕಾರಿ ರಾಜೇಂದ್ರ ಮಾತನಾಡಿ, ಈ ಬಗ್ಗೆ ಪರಿಶೀಲಿಸುವ ಭರವಸೆ ನೀಡಿದರು. ಈ ಸಂದರ್ಭ ಅಭಿವೃದ್ಧಿ ನಾಗರಿಕ ಸಮಿತಿಯ ಮುನೀರ್ ಕಾಟಿಪಳ್ಳ, ಮಧು ಆಚಾರ್ಯ, ಶಶಿ ಅಮೀನ್, ಇಕ್ಬಾಲ್ ಅಹಮದ್, ಮತ್ತಿತರರು ಉಪಸ್ಥಿತರಿದ್ದರು.
Kshetra Samachara
04/01/2021 08:13 pm