ಮುಲ್ಕಿ: ಹಳೆಯಂಗಡಿ ಸಮೀಪದ ಚೇಳೈರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಧ್ಯ ದೇವಸ್ಥಾನದ ಮುಂಭಾಗದ ರಸ್ತೆ ಕಾಂಕ್ರೀಟಿಕರಣಕ್ಕೆ ಜಿಲ್ಲಾ ಪಂಚಾಯತ್ ಸದಸ್ಯರ ಅನುದಾನ 2 ಲಕ್ಷ 30,000 ಬಿಡುಗಡೆಯಾಗಿದ್ದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭ ಅವರು ಮಾತನಾಡಿ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಈ ಸಂದರ್ಭ ತಾಲ್ಲೂಕು ಪಂಚಾಯತ್ ಸದಸ್ಯೆ ವಜ್ರಾಕ್ಷಿ ಶೆಟ್ಟಿ, ಚೇಳೈರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಯಾನಂದ, ಪುಷ್ಪರಾಜ್ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಪ್ರತಿಮಾ ಶೆಟ್ಟಿ, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಪುಷ್ಪರಾಜ್ ಕುಲಾಲ್,ಪ್ರಶಾಂತ್ ಶೆಟ್ಟಿ, ಡಿಶಾಂತ್ ಶೆಟ್ಟಿ, ಯಶೋದ,ಸುಕುಮಾರ್,ಸುಜಿತ್,ಗುತ್ತಿಗೆದಾರ ಗಜೇಂದ್ರ ಮುಂತಾದವರು ಉಪಸ್ಥಿತರಿದ್ದರು.
Kshetra Samachara
16/01/2021 10:34 pm