ಮಂಗಳೂರು: ತನ್ನದೇ ವೆಚ್ಚದಲ್ಲಿ ಬಡ ಕುಟುಂಬವೊಂದಕ್ಕೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಲ್ಪಿಸಿ ಸಾಮಾಜಿಕ ಬದ್ಧತೆ ಮೆರೆದ ಮಂಗಳೂರು ಮನಪಾ ಸದಸ್ಯರೊಬ್ಬರ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ನಗರದ ಬೋಳೂರು ಕಲ್ಲಾವು ಎಂಬಲ್ಲಿ ಮಾಲತಿ ಎಂಬ ಬಡ ಮಹಿಳೆಯೋರ್ವರು ತಮ್ಮ ಸಹೋದರಿಯ ಪುತ್ರನೊಂದಿಗೆ ವಾಸಿಸುತ್ತಿದ್ದು, ಇವರ ಮನೆಗೆ ಯಾವುದೇ ರೀತಿಯ ವಿದ್ಯುತ್ ಹಾಗೂ ನೀರಿನ ಸಂಪರ್ಕದ ವ್ಯವಸ್ಥೆಯಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಬೋಳೂರು ಕಾರ್ಪೊರೇಟರ್ ಜಗದೀಶ್ ಶೆಟ್ಟಿಯವರು ಕೂಡಲೇ ಸ್ಥಳಕ್ಕೆ ಧಾವಿಸಿ ಸ್ವಂತ ವೆಚ್ಚದಲ್ಲಿ ನೀರು ಹಾಗೂ ವಿದ್ಯುತ್ ಸಂಪರ್ಕದ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಅಲ್ಲದೆ, ಮಾಲತಿ ಅವರ ಮನೆಗೆ ಸುಣ್ಣ-ಬಣ್ಣ ಬಳಿದು ಸುಂದರವಾಗಿಸಿದ್ದಾರೆ.
ಇದೀಗ ಶಾಸಕ ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ಮನೆಯನ್ನು ಮಾಲತಿಯವರಿಗೆ ಹಸ್ತಾಂತರಿಸಲಾಯಿತು.
Kshetra Samachara
17/01/2021 09:19 am