ಕಡಬ: ಸರಕಾರಿ ಕಾರ್ಯ ಯೋಜನೆ ಜನರ ಬಳಿ ತಲುಪಿಸಲು ಅಧಿಕಾರಿಗಳ ಹಾಗೂ ಜನ ಸಹಭಾಗಿತ್ವದ 'ಗ್ರಾಮ ವಾಸ್ತವ್ಯ' ಮಹತ್ವದ ಕಾರ್ಯಕ್ರಮ ಎಂದು ಸಹಾಯಕ ಕಮಿಷನರ್ ಯತೀಶ್ ಉಳ್ಳಾಲ್ ತಿಳಿಸಿದರು.
ಅವರು ಇಂದು ಕಡಬ ಸಹಕಾರಿ ಸಂಘದ ಸಭಾಭವನದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು, ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜ.31 ರಂದು ಕಡಬದ ಕೊಂಬಾರು ಹಿ.ಪ್ರಾ. ಶಾಲೆಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದು ಅಧಿಕಾರಿಗಳ ಹೊಣೆಗಾರಿಕೆ ಯಾಗಿದ್ದು, ಈ ನಿಟ್ಟಿನಲ್ಲಿ ಪತ್ರಕರ್ತರು ಸ್ವಯಂ ಪ್ರೇರಿತರಾಗಿ ಗ್ರಾಮಾಭಿವೃದ್ಧಿಯಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.
ಈಗಾಗಲೇ ಕಂದಾಯ ಸಚಿವರು ನೀಡಿದ ಸೂಚನೆ ಪ್ರಕಾರ ಪ್ರತಿ ತಿಂಗಳ ಮೂರನೇ ಶನಿವಾರ ಕಂದಾಯ ಇಲಾಖೆಗೆ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವು ದು. ಇದರಿಂದ ಜನರ ಸಮಸ್ಯೆ ಪರಿಹರಿಸಲು ಸಹಕಾರಿಯಾಗಲಿದೆ ಎಂದರು.
ಕಡಬ ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ತಹಶೀಲ್ದಾರ್ ಅನಂತ ಶಂಕರ,ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಉಮೇಶ್ ಉಪ್ಪಳಿಗೆ,ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮೊದಲಾದವರು ಉಪಸ್ಥಿತರಿದ್ದರು.
Kshetra Samachara
25/01/2021 04:46 pm