ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕದ್ರಿ ಬಾಂದೊಟ್ಟು- ಗಾಂಧೀಜಿ ರಸ್ತೆ ಶಾಸಕರಿಂದ ಉದ್ಘಾಟನೆ

ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭೆ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್ 22 ರ ಕದ್ರಿ ಬಿ ಪದವು ವಾರ್ಡಿನಲ್ಲಿ ಕಾಂಕ್ರೀಟಿಕರಣಗೊಂಡು ಅಭಿವೃದ್ಧಿಗೊಂಡಿರುವ ಬಾಂದೊಟ್ಟು- ಗಾಂಧೀಜಿ ರಸ್ತೆಯನ್ನು ಶಾಸಕ ಡಾ.ವೈ. ಭರತ್ ಶೆಟ್ಟಿ ಶನಿವಾರ ಉದ್ಘಾಟಿಸಿದರು.

25.5 ಲಕ್ಷ ರೂ. ಅನುದಾನದಲ್ಲಿ ಈ ರಸ್ತೆ ಸಂಪೂರ್ಣ ಅಭಿವೃದ್ಧಿಯಾಗಿದೆ. ಶಾಸಕರ 2019 - 20ರ ಸಾಲಿನ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಲ್ಲಿ ಈ ರಸ್ತೆಗೆ ಅನುದಾನ ಒದಗಿಸಲಾಗಿದೆ.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಜಯಾನಂದ ಅಂಚನ್, ಮಹಾನಗರ ಪಾಲಿಕೆ ಕಾರ್ಯಪಾಲಕ ಎಂಜಿನಿಯರ್ ರಘುಪಾಲ್, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂಜೀತ್ ಶೆಟ್ಟಿ, ಬೂತ್ ಅಧ್ಯಕ್ಷ ಕಾರ್ತಿಕ್ ನಾಯಕ್, ಕಾರ್ಯದರ್ಶಿ ಜಯಪ್ರಕಾಶ್ ಭಟ್, ಪಕ್ಷದ ಪ್ರಮುಖರಾದ ಗುರುರಾಜ್ ಭಟ್, ಚಂದ್ರಣ್ಣ, ಹರಿಪ್ರಸಾದ್, ಜಯರಾಮ್ ಶೆಟ್ಟಿ, ಅಶ್ವತ್ಥ್, ಸ್ಥಳೀಯರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

30/01/2021 05:20 pm

Cinque Terre

6.37 K

Cinque Terre

0

ಸಂಬಂಧಿತ ಸುದ್ದಿ