ಬಂಟ್ವಾಳ: 400 ಕೆ.ವಿ. ಉಡುಪಿ- ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗದ ಆತಂಕಿತ ಸಂತ್ರಸ್ತರ ಸಭೆ ಬಂಟ್ವಾಳ ತಾಲೂಕಿನ ಲೊರೆಟ್ಟೊ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಫೆ.7ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ನೇತೃತ್ವದಲ್ಲಿ ಸಂತ್ರಸ್ತರ ಹೋರಾಟ ಸಮಿತಿ ಆಶ್ರಯದಲ್ಲಿ ಸಭೆ ನಡೆಯಲಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಫೆರ್ನಾಂಡಿಸ್ ತಿಳಿಸಿದ್ದು, ಹಿರಿಯ ಮುಖಂಡರು ಆಗಮಿಸಿ ಮಾರ್ಗದರ್ಶನ ನೀಡಲಿದ್ದಾರೆ. ಹೋರಾಟದ ರೂಪುರೇಷೆ ಕುರಿತು ಸಭೆಯಲ್ಲಿ ನಿರ್ಧರಿಸಲಾಗುವುದು ಎಂದರು.
Kshetra Samachara
06/02/2021 10:22 am