ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಯುವಜನರಿಗೆ ಕೌಶಲ್ಯಭಿವೃದ್ಧಿ ತರಬೇತಿಗೆ ಒತ್ತು ನೀಡಿ; ಅಪರ ಜಿಲ್ಲಾಧಿಕಾರಿ ರೂಪಾ

ಮಂಗಳೂರು: ಯುವಜನರ ಜೀವನೋಪಾಯಕ್ಕೆ ದಾರಿಯಾಗುವ ಕೌಶಲ್ಯ ಅಭಿವೃದ್ಧಿ ತರಬೇತಿಗಳನ್ನು ನೆಹರೂ ಯುವ ಕೇಂದ್ರವು ನೀಡುವುದರೊಂದಿಗೆ ಸ್ವ ಉದ್ಯೋಗಕ್ಕೆ ಅವಕಾಶ ಕಲ್ಪಿಸಿ ಸ್ವಾವಲಂಬಿಗಳನ್ನಾಗಿಸಲು ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ ತಿಳಿಸಿದರು.

ಜಿಲ್ಲಾಧಿಕಾರಿಯವರ ಸಭಾಂಗಣದಲ್ಲಿ ನಡೆದ ಕ್ರೀಡಾ ಸಚಿವಾಲಯ ಹಾಗೂ ನೆಹರೂ ಯುವ ಕೇಂದ್ರದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ನೆಹರೂ ಯುವ ಕೇಂದ್ರವು ಯುವಜನರಲ್ಲಿ ಉತ್ತಮ ಹವ್ಯಾಸಗಳನ್ನು ಬೆಳೆಸುವುದು ಸೇರಿದಂತೆ ಕಲೆ, ಸಂಸ್ಕೃತಿಗಳನ್ನು ಬೆಳೆಸಿ ಅವರನ್ನು ಶಿಕ್ಷಣವಂತರನ್ನಾಗಿಸಿ ಉತ್ತಮ ಸಮಾಜ ನಿರ್ಮಾಣ ಮಾಡುವುದರೊಂದಿಗೆ ಸದೃಢ ಭಾರತ ನಿರ್ಮಾಣಕ್ಕೆ ಕೈ ಜೋಡಿಸಬೇಕು. ವಿಶೇಷವಾಗಿ ಮಹಿಳೆಯರಿಗೆ ಹೆಚ್ಚಾಗಿ ಕೌಶಲ್ಯಭಿವೃದ್ಧಿ ತರಬೇತಿಗಳನ್ನು ನೀಡುವಲ್ಲಿ ಯುವ ಕೇಂದ್ರವು ಪ್ರಾಶಸ್ತ್ಯ ನೀಡಬೇಕು. ಗ್ರಾಮೀಣ ಭಾಗದ ಮಹಿಳೆಯರ ತರಬೇತಿಗೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿರುವ ಹಿಂದುಳಿದ ಗ್ರಾಮಗಳು ಅಥವಾ ಶಾಲೆಗಳನ್ನು ದತ್ತು ಪಡೆದು ಅವುಗಳ ಅಭಿವೃದ್ಧಿ ಕಾರ್ಯಗಳನ್ನು ಮಾಡುವಂತೆ ಇಲಾಖೆಯ ಅಧಿಕಾರಿಗಳಿಗೆ ಎಂ.ಜೆ.ರೂಪಾ ಸೂಚಿಸಿದರು.

ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ, ಕೌಶಲ್ಯ ಅಭಿವೃದ್ಧಿ ಇಲಾಖೆಯ ನೋಡಲ್ ಅಧಿಕಾರಿ ತಾರನಾಥ್, ಜಿಲ್ಲಾ ಅಗ್ರ ಬ್ಯಾಂಕ್‍ನ ವ್ಯವಸ್ಥಾಪಕ ಪ್ರವೀಣ್, ಎನ್‍ಸಿಸಿ ನೋಡಲ್ ಅಧಿಕಾರಿ ಲೆಫ್ಟಿನೆಂಟ್ ಕಲೋನೆಲ್ ಮತ್ತಿತರರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

06/02/2021 03:12 pm

Cinque Terre

3.79 K

Cinque Terre

0

ಸಂಬಂಧಿತ ಸುದ್ದಿ