ಮುಲ್ಕಿ: ಇಲ್ಲಿಗೆ ಸಮೀಪದ ಅತಿಕಾರಿಬೆಟ್ಟು ಗ್ರಾಪಂ ಆಶ್ರಯದಲ್ಲಿ ಘನತ್ಯಾಜ್ಯ ನಿರ್ವಹಣೆ ಕಾರ್ಯಾಗಾರ ಅತಿಕಾರಿಬೆಟ್ಟು ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿ ಜಿಲ್ಲಾ ಯೋಜನೆ ನಿರ್ದೇಶಕ ಮಧುಕುಮಾರ್ ಮಾತನಾಡಿ, ಮಹಿಳೆಯರ ಒಕ್ಕೂಟದ ಮೂಲಕ ಘನ ತ್ಯಾಜ್ಯ ಕಾರ್ಯಾಗಾರ ನಡೆಸುತ್ತಿರುವುದು ಶ್ಲಾಘನೀಯವಾಗಿದ್ದು ಅಭಿವೃದ್ಧಿಯ ಸಂಕೇತ ಎಂದರು.
ಮುಖ್ಯ ಅತಿಥಿಗಳಾಗಿ ಘನತ್ಯಾಜ್ಯ ನಿರ್ವಹಣೆಯ ಮೇಲುಸ್ತುವಾರಿ ಸಂಸ್ಥೆ ಸ್ವಚ್ಛ ಭಾರತ್ ಮಿಷನ್ ನ ಜಿಲ್ಲಾ ಸಂಯೋಜಕ ನವೀನ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸಂಯೋಜಕ ಹರಿಪ್ರಸಾದ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶಾರದಾ ವಸಂತ್ ಉಪಸ್ಥಿತರಿದ್ದರು. ಅತಿಕಾರಿ ಬೆಟ್ಟು ಪಂಚಾಯಿತಿ ಪಿಡಿಒ ರವಿ ಕುಮಾರ್ ಸ್ವಾಗತಿಸಿದರು. ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
09/02/2021 12:52 pm