ಮುಲ್ಕಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಮಂಗಳೂರು ತಾಲೂಕು ಪಂಚಾಯತ್, ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ""ನಮ್ಮ ಗ್ರಾಮ ನಮ್ಮ ಜವಾಬ್ದಾರಿ"ಎಂಬ ಧ್ಯೇಯೋದ್ದೇಶದಿಂದ "ನಮ್ಮ ನಡಿಗೆ ತ್ಯಾಜ್ಯಮುಕ್ತ ಕಡೆಗೆ"ಸ್ವಚ್ಚತೆ ಜಾಗೃತಿ ರಥದ ಮೂಲಕ ಅತಿಕಾರಿಬೆಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಿತು.ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಮಾತನಾಡಿ ಪಂಚಾಯಿತಿ ವ್ಯಾಪ್ತಿಯಲ್ಲಿ ನಾಗರಿಕರು ಸ್ವಚ್ಛತೆಗೆ ಪ್ರಾಮುಖ್ಯತೆ ನೀಡುವುದರ ಜೊತೆಗೆ ಸುಂದರ ರಾಷ್ಟ್ರ ನಿರ್ಮಾಣ ಮಾಡಲು ಸಹಕರಿಸಬೇಕೆಂದು ವಿನಂತಿಸಿದರು. ಈ ಸಂದರ್ಭ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛ ಗ್ರಾಮದ ಬಗ್ಗೆ ಗ್ರಾಮಸ್ಥರಿಗೆ ತಿಳುವಳಿಕೆಗಳನ್ನು ನೀಡುವುದರ ಮೂಲಕ ಜಾಗೃತಿ ಮೂಡಿಸಲಾಯಿತು.
Kshetra Samachara
14/02/2021 10:52 am