ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭೆ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 19 ನೇ ಪಚ್ಚನಾಡಿ ವಾರ್ಡ್ ನ ಮುಖ್ಯ ಸೇತುವೆಯಿಂದ ವೈದ್ಯನಾಥಕ್ಕೆ ಸಂಪರ್ಕಿಸುವ ರಸ್ತೆ ಪಕ್ಕದಲ್ಲಿ ಹಾದು ಹೋಗುವ ರಾಜ ಕಾಲುವೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ಶಾಸಕ ಡಾ.ವೈ. ಭರತ್ ಶೆಟ್ಟಿ ಭಾನುವಾರ ಗುದ್ದಲಿಪೂಜೆ ನೆರವೇರಿಸಿದರು.
ಸರಕಾರದ ಸಣ್ಣ ನೀರಾವರಿ ಇಲಾಖೆಯಿಂದ 25 ಲಕ್ಷ ರೂ. ಅನುದಾನದಲ್ಲಿ ಈ ಅಭಿವೃದ್ಧಿ ಕಾರ್ಯ ನಡೆಯಲಿದೆ. ಈ ಸಂದರ್ಭ ಸ್ಥಳೀಯ ಕಾರ್ಪೊರೇಟರ್ ಸಂಗೀತಾ ಆರ್ .ನಾಯಕ್, ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಬಿಜೆಪಿ ಮುಖಂಡರಾದ ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಪ್ರಶಾಂತ್ ಪೈ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ರಾಮ ಮುಗ್ರೋಡಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
14/02/2021 02:26 pm